ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಯತೀಶ್ ಧರ್ಮಸ್ಥಳ ರಾಜೀನಾಮೆ

0

​ಬೆಳ್ತಂಗಡಿ: ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲ್ಲೂಕು ಸದಸ್ಯ ಸ್ಥಾನಕ್ಕೆ ಯತೀಶ್ ಧರ್ಮಸ್ಥಳ ಅವರು ವೈಯಕ್ತಿಕ ಕಾರಣಗಳಿಂದ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.​ಕಳೆದ ಮೂರೂವರೆ ವರ್ಷಗಳಿಂದ ಸಮಿತಿಯ ತಾಲ್ಲೂಕು ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿರುವ ಅವರು, ತಮಗೆ ಜನಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸ್ವಯಂ ಇಚ್ಛೆಯಿಂದ ತಾವು ವಹಿಸಿಕೊಂಡಿದ್ದ ಜವಾಬ್ದಾರಿಯಿಂದ ಕೆಳಕ್ಕಿಳಿಯುತ್ತಿದ್ದು, ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here