






ಬೆಳ್ತಂಗಡಿ: ಪೋಕ್ಸೋ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಬ್ದುಲ್ ಲತೀಫ್‌ಗೆ ಮಂಗಳೂರು ನ್ಯಾಯಾಲಯ 20 ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದೆ.


ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಅ.ಕ್ರ : 141/2025, ಕಲಂ: 4,6,8,12,19(1)(b), 21ಅಬ್ದು ಪೋಕ್ಸೋ ಆಕ್ಟ್ -2012 & ಕಲಂ : 64(2)(f), 75 r/w 3(5)BNS-2023 ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಹಾಗೂ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭರವರು ಪ್ರಕರಣದ ತನಿಖೆ ನಡೆಸಿ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಆರೋಪಿತನಾದ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಹಾಗೂ ಇತರೆ ಇಬ್ಬರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-2ನಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿತನಾದ ಅಬ್ದುಲ್ ಲತಿಫ್ ಎಂಬಾತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಾನು ಕೆ.ಎಸ್. ಅವರು ಸೆ. 19ರಂದು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು 80000 ದಂಡ ವಿಧಿಸಿ ಅದೇಶಿಸಿದ್ದಾರೆ.
ಸರ್ಕಾರಿ ಅಭಿಯೋಜಿಕರಾದ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.









