ಕೂಕ್ರಬೆಟ್ಟು ಶಾಲೆಯಲ್ಲಿ 8ನೇ ತರಗತಿ ಆರಂಭಕ್ಕೆ ಅನುಮತಿ – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಗ್ರಾಮಸ್ಥರಿಂದ ಕೃತಜ್ಞತೆ September 20, 2026 0 FacebookTwitterWhatsApp ಮರೋಡಿ: ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ಪ್ರಾರಂಭಿಸಲು ಅನುಮತಿ ದೊರಕಿದೆ.ಈ ಅನುಮತಿ ದೊರಕಿಸಿಕೊಡುವಲ್ಲಿ ವಿಶೇಷವಾಗಿ ಶ್ರಮಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮರೋಡಿ ಗ್ರಾಮಸ್ಥರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.