ವೇಣೂರು ಸಹಕಾರ ಸಂಘದಮಹಾಸಭೆ ವಾರ್ಷಿಕ ರೂ. 456.09 ಕೋಟಿ ವ್ಯವಹಾರನಿವ್ವಳ ರೂ. 2. 04 ಕೋಟಿ ಲಾಭ ಹಿರಿಯ ನಾಗರಿಕರಿಗೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

0

ವೇಣೂರು : ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 20 ರಂದು ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ವೇಣೂರು ಶ್ರೀ ಬಾಹುಬಲಿ ಸಭಾ ಭವನದಲ್ಲಿ ಜರಗಿತು.ಆರ್ಥಿಕ ವರ್ಷದಲ್ಲಿ ಒಟ್ಟು ರೂ. 456.09ಕೋಟಿ ವ್ಯವಹಾರ ನಡೆಸಿ ರೂ. 2.04 ಕೋಟಿ ನಿವ್ವಳ ಲಾಭ ಗಳಿಸಿದೆ.

ಸದಸ್ಯರಿಗೆ ಶೇ. 20 ಡಿವಿಡೆಂಟ್ ಘೋಷಣೆ ಮಾಡಲಾಯಿತು.ಮಹಾಸಭೆಯಲ್ಲಿ ಸಂಘದ 10 ಮಂದಿ ಹಿರಿಯ ನಾಗರಿಕರನ್ನು ಹಾಗೂ ಸಹಕಾರ ಸಂಘದ ವ್ಯಾಪ್ತಿಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಶೇ. 95 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಎಸ್ ಎಸ್ ಎಲ್ ಸಿ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.

ಭತ್ತದ ಕೃಷಿಗೆ ಪ್ರೋತ್ಸಾಹ ನೀಡಲಾಯಿತು.ಸಂಘದ ಅಧ್ಯಕ್ಷ ಸುಂದರ ಹೆಗ್ಡೆ B.E. ಸ್ವಾಗತಿಸಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಯಂತ ಪೂಜಾರಿ ವರದಿ ವಾಚಿಸಿದರು.ಉಪಾಧ್ಯಕ್ಷರತ್ನಾಕರ ಬಿ., ನಿರ್ದೇಶಕರುಗಳಾದ ರಾಮ್‌ದಾಸ್ ನಾಯಕ್, ಸಂದೀಪ್ ಹೆಗ್ಡೆ, ಎಂ.ಆರ್. ಸಂತೋಷ್, ನಾಗಪ್ಪ, ಆಶಾ, ರೋಹಿಣಿ, ಕೃಷ್ಣಪ್ಪ ಮೂಲ್ಯ, ಪ್ರಶಾಂತ್, ರಾಜು ನಾಯ್ಕ, ಪ್ರವೀಣ, ದ.ಕ. ಜಿಲ್ಲಾ ಕೇಂದ್ರ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು

LEAVE A REPLY

Please enter your comment!
Please enter your name here