







ಪೆರಿಂಜೆ : ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಪ್ರಾಮಾಣಿಕ ಕಾರ್ಯಕರ್ತರಾಗಿ ದುಡಿದು, ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ನ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕದ ಮಾಜಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಳದಂಗಡಿ ಕ್ಷೇತ್ರದ ಮಾಜಿ ಸದಸ್ಯರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಮತ್ತು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ ಪ್ರಭಾವಿ ನಾಯಕರೂ ಆಗಿರುವ, ತಳಮಟ್ಟದ ಪಕ್ಷದ ಕಾರ್ಯಕರ್ತರಿಗೆ ಗೌರವ ನೀಡುತ್ತಿರುವ ಶೇಖರ್ ಕುಕ್ಕೇಡಿ ರವರ ರಾಜೀನಾಮೆ ಬೇಸರ ತಂದಿದೆ.


ಜಿಲ್ಲೆಯ ನಾಯಕರು ಕೂಡಲೇ ಮಧ್ಯ ಪ್ರವೇಶಿಸಿ ರಾಜೀನಾಮೆ ವಾಪಾಸ್ಸು ಪಡೆಯಲು ಮನವೊಳಿಸಬೇಕು.ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಕಾಂಗ್ರೇಸ್ ಪಕ್ಷಕ್ಕೆ ಹಿಂದಿನಿಂದಲೂ ಬೆಂಬಲ ನೀಡುತ್ತಾ ಬರುತ್ತಿದ್ದು, ನಾಯಕರು ಇವರ ಬೇಡಿಕೆಯನ್ನು ತಕ್ಷಣ ಪರಿಶೀಲಿಸಿ ಕ್ರಮವಹಿಸಲು *ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಖಾಲಿದ್ ಪುಲಾಬೆ ಮನವಿ ಮಾಡಿದ್ದಾರೆ









