







ನಾವೂರು: ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಸೆ. 22ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನಾವೂರು ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
ಪಂಚಾಯತ್ ಆಡಳಿತಾಧಿಕಾರಿಯಾಗಿರುವ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜನಾರ್ದನ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಅವರು ಗ್ರಾಮಸಭೆಯನ್ನು ಅಚ್ಚುಕಟ್ಟಾಗಿ ಮುನ್ನಡೆಸಿದರು.ಗ್ರಾಮಸಭೆಯಲ್ಲಿ ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಅರಣ್ಯ ಇಲಾಖೆ, ಪಶು ಇಲಾಖೆ,ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ತಮ್ಮ ಇಲಾಖೆಯಡಿ ಸರ್ಕಾರದಿಂದ ಸಿಗುವ ಸೌಲಭ್ಯಗಳು, ಯೋಜನೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗ್ರಾಮಸ್ಥರಿಗೆ ಸಮಗ್ರ ಮಾಹಿತಿ ನೀಡಿದರು.



ಗ್ರಾಮದ ಮೂಲಭೂತ ಸಮಸ್ಯೆಗಳು, ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರು ಪ್ರಶ್ನೆಗಳನ್ನು ಕೇಳಿ ಅಧಿಕಾರಿಗಳಿಂದ ಉತ್ತರ ಪಡೆದುಕೊಂಡರು.ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಅವರು ಕಳೆದ ಸಾಲಿನ ಅಭಿವೃದ್ಧಿ ಕಾರ್ಯಗಳ ವರದಿ ಹಾಗೂ ಅನುಪಾಲನಾ ವರದಿಯನ್ನು ವಾಚಿಸಿದರು. ಪಂಚಾಯತ್ ಸಿಬ್ಬಂದಿ ರಶ್ಮಿ ಅವರು ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆಗಳ ವಿವರವನ್ನು ಮಂಡಿಸಿದರೆ, ವನಜಾ ಅವರು ಪಂಚಾಯತ್ ನ ಜಮಾ-ಖರ್ಚಿನ ಲೆಕ್ಕಪತ್ರವನ್ನು ಸಭೆಯ ಮುಂದಿಟ್ಟರು.

ಕಾರ್ಯಕ್ರಮವನ್ನು ಸ್ವಾತಿ ಅವರು ನಿರೂಪಿಸಿದರು, ಸೇವಿತಾ ಅವರು ಸ್ವಾಗತಿಸಿದರು. ಕೊನೆಯಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರ ಸಹಕಾರಿಸಿದರು,









