






ಬೆಳ್ತಂಗಡಿ: ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ತುಳು ಭಾಷೆಗೆ ಮಾನ್ಯತೆ ನೀಡಿರುವ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಹಾಗೂ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.


ಸೆಪ್ಟೆಂಬರ್ 18, 2026ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಡಳಿತಾತ್ಮಕ ವ್ಯವಹಾರಗಳಿಗೆ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.ತುಳು ಕೇವಲ ಒಂದು ಭಾಷೆಯಲ್ಲ; ಅದು ಕರಾವಳಿಯ ಸಾವಿರಾರು ವರ್ಷಗಳ ಶ್ರೀಮಂತ ಸಂಸ್ಕೃತಿ, ಪರಂಪರೆ, ಜನಜೀವನ ಹಾಗೂ ಅಸ್ಮಿತೆಯ ಪ್ರತೀಕವಾಗಿದೆ. ತುಳು ಭಾಷೆಗೆ ದೊರೆತಿರುವ ಈ ಮಾನ್ಯತೆ ತುಳು ಭಾಷಿಕರ ಬಹುದಿನಗಳ ಆಶಯಕ್ಕೆ ಸಂದ ಗೌರವವಾಗಿದ್ದು, ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಮತ್ತು ಆಡಳಿತಾತ್ಮಕ ಬಳಕೆಗೆ ಹೊಸ ಅವಕಾಶಗಳನ್ನು ತೆರೆದಿಡಲಿದೆ.
ಈ ಮಹತ್ವದ ನಿರ್ಧಾರಕ್ಕಾಗಿ ಕರ್ನಾಟಕ ಸರ್ಕಾರ, ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ತುಳು ಭಾಷೆಯ ಇನ್ನಷ್ಟು ಬೆಳವಣಿಗೆ ಹಾಗೂ ಭವಿಷ್ಯದ ಪೀಳಿಗೆಗಳಿಗೆ ಅದರ ಶ್ರೀಮಂತ ಪರಂಪರೆಯನ್ನು ಉಳಿಸುವ ಕಾರ್ಯಕ್ಕೆ ಈ ನಿರ್ಧಾರ ಹೊಸ ಶಕ್ತಿಯನ್ನು ನೀಡಲಿ ಎಂದು ಆಶಿಸುತ್ತೇನೆ. – ರೊ. ಪ್ರಶಾಂತ್ ಶೆಟ್ಟಿ ಮೂಡಯೂರು* ಅಧ್ಯಕ್ಷರು, ರೋಟರಿ ಕ್ಲಬ್ ಮಡಂತ್ಯಾರುಜಿಲ್ಲಾಧ್ಯಕ್ಷರು, ಅಡಿಕೆ ವರ್ತಕರ ಸಂಘ ದ. ಕ. ಜಿಲ್ಲೆ.









