ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

0

ಬೆಳ್ತಂಗಡಿ, ಸೆ. 20: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್, ಬೆಳ್ತಂಗಡಿ ನಗರ ಪಂಚಾಯತ್, ಮಹಾತ್ಮ ಗಾಂಧಿ ಮಡಂತ್ಯಾರ್ ಗ್ರಾಮ ಪಂಚಾಯಿತ್, ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜ್ ಮಡಂತ್ಯರ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2026–27 ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಮೈದಾನ, ಮಡಂತ್ಯಾರಿನಲ್ಲಿ ಸೆ. 20ರಂದು ನಡೆಯಿತು.

ಕಾರ್ಯಕ್ರಮವು , ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳಿಂದ ವಂದೇ ಮಾತರಂ ಹಾಗೂ ನಾಡಗೀತೆ ಗಾಯನ ನಡೆಯಿತು. ಬಳಿಕ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ಅವರು ಸ್ವಾಗತಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ವಹಿಸಿದ್ದರು.

ತಾಲೂಕು ಪಂಚಾಯತ್ ಕಾರ್ಯನಿರ್ವಣಧಿಕಾರಿಗಳು ಭವಾನಿ ಶಂಕರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್. ನರಗುಂದ್ ಉಪಸ್ಥಿತರಿದ್ದರು.ವಿಶೇಷ ಆಹ್ವಾನಿತರಾಗಿ ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಡಾ. ಸ್ಟಾನಿ ಗೋವಿಯಸ್, ಪ್ರಾಂಶುಪಾಲರಾದ ಪ್ರೊ. ಅಲೆಕ್ಸ್ ಐವನ್ ಸಿಕ್ವೇರಾ ಹಾಗೂ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ವಿಜಯಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ SDM Sports Club, ಉಜಿರೆಯ ಕ್ರೀಡಾ ಕಾರ್ಯದರ್ಶಿ ರಮೇಶ್ ಎಚ್., ತಾಲೂಕು ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ದಕ್ಷಿಣ ಕನ್ನಡ ಅಮೆಚೂರ್ ಕಬಡ್ಡಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಫ್ರಾನ್ಸಿಸ್ VB, ಅಜಿತ್ ಕುಮಾರ್ ಕೊಕ್ರಾಡಿ ಶ್ರೀನಿವಾಸ್ ಡಿ ಎಸ್ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಡಂತ್ಯಾರ್ , ಕ್ರೀಡಾಕೂಟದ ನೋಡಲು ಅಧಿಕಾರಿಗಳಾದ ಡಾಕ್ಟರ್ ಪ್ರಕಾಶ್ ಡಿಸೋಜಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಾಂತಪ್ಪ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು. ವಸಂತ್ ಶೆಟ್ಟಿ ಮಾಡಿದರು ಹಾಗೂ ವಂದನಾರ್ಪಣೆಯನ್ನು ಶಾಂತಪ್ಪ ನೆರವೇರಿಸಿದರು.

ತಾಲೂಕಿನ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು ಹಾಗೂ ಕ್ರೀಡಾಪಟುಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕ್ರೀಡಾಕೂಟದ ಮೂಲಕ ಯುವಜನರಲ್ಲಿ ಕ್ರೀಡಾ ಪ್ರತಿಭೆ, ಶಿಸ್ತು, ಸಹಕಾರ ಮನೋಭಾವ ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಬೆಳೆಸುವುದು ಮುಖ್ಯ ಉದ್ದೇಶವಾಗಿತ್ತು.

LEAVE A REPLY

Please enter your comment!
Please enter your name here