ಪತ್ನಿ ಚಿನ್ನಮ್ಮರ ಶವ ಕೆರೆಯಲ್ಲಿ ಪತ್ತೆಯಾದ ಐದು ದಿನದ ಬಳಿಕ ಪತಿ ತನಿಯಪ್ಪ ಗೌಡ ನೇಣು ಬಿಗಿದು ಆತ್ಮಹತ್ಯೆ

0

ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.23ರಂದು ಬೆಳಕಿಗೆ ಬಂದಿದೆ.ಎರಡು-ಮೂರು ದಿನಗಳಿಂದ ತನಿಯಪ್ಪ ಗೌಡ ಅವರು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ರಾಧಾಕೃಷ್ಣ ಗುತ್ತು, ಕುಶಾಲಪ್ಪ ಗೌಡ ಬದ್ರಿಜಾಲು, ಸುಬ್ರಾಯ ಗೌಡ ಬದ್ರಿಜಾಲು ಹಾಗೂ ಶೀನಪ್ಪ ನಾಯ್ಕ ಮುಚ್ಚಿರಡ್ಕ ಅವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತನಿಯಪ್ಪ ಗೌಡ ಅವರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಇತ್ತೀಚೆಗೆ ಅವರ ಪತ್ನಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಜಮೀನಿನಲ್ಲಿರುವ ಕೆರೆಯಲ್ಲಿ ಪತ್ತೆಯಾಗಿತ್ತು. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿರಲಿಲ್ಲ. ಈ ಬಗ್ಗೆ ಚಿನ್ನಮ್ಮ ಅವರ ಸಹೋದರ ಗಂಗಾಧರ ಗೌಡ ಅವರು ಮೃತರ ಮರಣದಲ್ಲಿ ಸಂಶಯ ಕಂಡುಬರುತ್ತದೆ ಎಂದು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಪತಿ ತನಿಯಪ್ಪ ಗೌಡ ಅವರ ಮೃತದೇಹವೂ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡೂ ಘಟನೆಗಳಿಗೆ ಸಂಬಂಧಿಸಿದ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ.ಮೃತರು ಮಕ್ಕಳಾದ ಸತ್ಯಶ್ರೀ ಹಾಗೂ ಆದಿತ್ಯ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here