






ಬೆಳ್ತಂಗಡಿ: ದಿವಂಗತ ಕಾಶಿ ಶೆಟ್ಟಿ ನವಶಕ್ತಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಕುವೆಟ್ಟು ಹಾಗೂ ಓಡಿಲ್ನಾಳ ಗ್ರಾಮದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅವರ ಹೆಸರಿನಲ್ಲಿ ವಿದ್ಯಾರ್ಥಿವೇತನ ನೀಡಲು ನವಶಕ್ತಿ ಕುಟುಂಬಸ್ಥರು ಮುಂದಾಗಿದ್ದಾರೆ.


ಗ್ರಾಮದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕುಟುಂಬಸ್ಥರು ತಿಳಿಸಿದ್ದಾರೆ.ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಐಡಿ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿಯನ್ನು ಸೆ.30, 2026ರೊಳಗೆ ಪ್ರದೀಪ್ ಶೆಟ್ಟಿ ಪಾಡ್ಯಾರು ಅವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9743208376 ಸಂಪರ್ಕಿಸಬಹುದು.
ದಿವಂಗತ ಕಾಶಿ ಶೆಟ್ಟಿ ನವಶಕ್ತಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅ.13, 2026ರಂದು ನಡೆಯಲಿದ್ದು, ಇದೇ ಸಂದರ್ಭದಲ್ಲಿ ವಿದ್ಯಾರ್ಥಿವೇತನ ವಿತರಿಸಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿದ್ದು ವಿದ್ಯಾರ್ಥಿವೇತನ ಸ್ವೀಕರಿಸಬೇಕು. ನಿಗದಿತ ದಿನದಂದು ಹಾಜರಾಗದೆ ನಂತರ ಬರುವವರಿಗೆ ವಿದ್ಯಾರ್ಥಿವೇತನ ನೀಡಲು ಅವಕಾಶವಿರುವುದಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.









