






ಅಳದಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟವು ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಶಿವಪ್ರಸಾದ್ ಅಜಿಲ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವದಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರ ಜೊತೆಗೆ ಸಮಾಜಮುಖಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.


ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸದಾನಂದ ಪೂಜಾರಿ ಉಂಗಿಲಬೈಲು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕರಾದ ಯಶೋಧರ ಸುವರ್ಣ, ಪ್ರೌಢಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಸದಾಶಿವ ಪೂಜಾರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶಾಂತಿಮರಿಯ ಸಲ್ದಾನ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರ್ ಹಾಗೂ ಆಮಂತ್ರಣ ಪತ್ರಿಕೆಯ ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆ.ಎಮ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಉಪನ್ಯಾಸಕರಾದ ಪ್ರಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು.









