ಎಲ್ ಸಿ ಆರ್. ವಿದ್ಯಾಸಂಸ್ಥೆಗೆ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

0

ಕಕ್ಯಪದವು : ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ 2026-27 ರ ತ್ರೋಬಾಲ್ ಪಂದ್ಯಾಟವು ಸೆ.20 ರಂದು ಸೇಕ್ರೆಡ್ ಹಾರ್ಟ್ ಕ್ರೀಡಾಂಗಣ ಮಡಂತ್ಯಾರ್ ಇಲ್ಲಿ ನಡೆದ ತ್ರೋಬಾಲ್ ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿನಿಯರು ಭಾಗವಹಿಸಿ ಅತ್ಯಂತ ರೋಚಕ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಇವರು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯಪಾಧ್ಯಾಯಿನಿ,ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದರು.ಇವರಿಗೆ ದೈಹಿಕ ಶಿಕ್ಷಕರಾದ ಹರಿಣಾಕ್ಷಿ ಹಾಗೂ ಪೃಥ್ವಿ ರಾಜ್ ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here