






ಬೆಳ್ತಂಗಡಿ: ನ್ಯಾಯಾಲಯದಲ್ಲಿ ದಾಖಲಾಗಿರುವ ಮತ್ತು ನ್ಯಾಯಾಲಯಕ್ಕೆ ದಾಖಲಾಗದೇ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಸೆ.19 ರಂದು ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿಒಟ್ಟು 318 ಪ್ರಕರಣಗಳಲ್ಲಿ 143 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ 1,89,90,552 ಪರಿಹಾರ ಮೊತ್ತ ವಿತರಿಸಲು ಆದೇಶಿಸಲಾಗಿದೆ.
ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಜನನ- ಮರಣ ನೋಂದಣಿ, ಚೆಕ್ ಬೌನ್ಸ್, ಆಸ್ತಿ ಪ್ರಕರಣ, ಮೋಟರ್ ಪ್ರಕರಣ, ಬ್ಯಾಂಕ್ ಪ್ರಕರಣ ಹಾಗೂ ಇತರ ಸಣ್ಣ ಪುಟ್ಟ ಪ್ರಕರಣಗಳನ್ನು ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.


ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮನು ಬಿ.ಕೆ ನ್ಯಾಯಾಲಯದಲ್ಲಿ 150 ಪ್ರಕರಣಗಳಲ್ಲಿ 73 ಪ್ರಕರಣಗಳು ಇತ್ಯರ್ಥಗೊಂಡಿದ್ದು ರೂ.10,761,522ಪರಿಹಾರ ವಿತರಣೆಗೆ ಆದೇಶ ಆಗಿದೆ.ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ನ್ಯಾಯಾಲಯದಲ್ಲಿ 95 ಪ್ರಕರಣಗಳಲ್ಲಿ 42 ಪ್ರಕರಣಗಳು ಇತ್ಯರ್ಥಗೊಂಡಿದ್ದು ರೂ. 1,98,214 ಪರಿಹಾರ ವಿತರಣೆಗೆ ಆದೇಶಿಸಲಾಗಿದೆ.ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 1605ರಲ್ಲಿ 659 ಪ್ರಕರಣ ಇತ್ಯರ್ಥಗೊಂಡಿದೆ. ರೂ.59,83,593 ಪರಿಹಾರ ಮೊತ್ತ ವಿತರಿಸಲು ಆದೇಶ ಮಾಡಲಾಗಿದೆ.
ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ನ್ಯಾಯಾಲಯದಲ್ಲಿ 73 ಪ್ರಕರಣಗಳಲ್ಲಿ 28 ಪ್ರಕರಣಗಳು ಇತ್ಯರ್ಥಗೊಂಡಿದೆ. ರೂ.80,30, 816.15 ವಿತರಣೆಗೆ ಆದೇಶಿಸಲಾಗಿದೆ.
ಪ್ರಕರಣಗಳ ಇತ್ಯರ್ಥಕ್ಕೆ ವಕೀಲ ಸಂಧಾಕನಕಾರರಾಗಿ ಭಾಗ್ಯಶ, ಹೇಮಲತಾ , ನಿಶ್ಮಿತ ಸಹಾಯಕ ಸರಕಾರಿ ಅಭಿಯೋಜಕರಾದ ಎ.ಪಿ.ಪಿ ದಿವ್ಯರಾಜ್ ಹೆಗ್ಡೆ, ಅಶಿತಾ.ಎಂ, ಅಪಾರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ ಸಹಕರಿಸಿದರು.









