ಅಂಡಿಂಜೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

0

​ಅಂಡಿಂಜೆ: ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಅಂಡಿಂಜೆ ಹಾಗೂ ನ್ಯೂ ವಿಷನ್ ಪ್ರೋಗ್ರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶ್ರೀ ರಾಮ – ಶ್ರೀ ವಿನಾಯಕ ಭಜನಾ ಮಂದಿರದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರವು ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಭಜನಾ ಮಂದಿರದ ಸಭಾಂಗಣದಲ್ಲಿ ಜರುಗಿತು.​

ಕಾರ್ಯಕ್ರಮದಲ್ಲಿ ಸೌಮ್ಯ ಸ್ವಾಗತ ಕೋರಿದರು. ಭಜನಾ ಮಂದಿರ ಕಟ್ಟಡ ಸಮಿತಿ ಅಧ್ಯಕ್ಷ ಮೋಹನ್ ಅಂಡಿಂಜೆ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.​ನ್ಯೂ ವಿಷನ್ ಪ್ರೋಗ್ರಾಂ ಮ್ಯಾನೇಜರ್ ರಾಮಚಂದ್ರ ಅವರು ಶಿಬಿರದ ಉದ್ದೇಶ ಹಾಗೂ ಕಣ್ಣಿನ ಆರೈಕೆಯ ಮಹತ್ವದ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.​ಈ ಉಚಿತ ಕಣ್ಣಿನ ಶಿಬಿರದಲ್ಲಿ ಸುತ್ತಮುತ್ತಲಿನ ಒಟ್ಟು 65 ಗ್ರಾಮಸ್ಥರು ಪಾಲ್ಗೊಂಡು, ನೇತ್ರ ತಪಾಸಣೆ ಮಾಡಿಸಿಕೊಂಡು ಇದರ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here