






ವೇಣೂರು:ವೇಣೂರು ಗ್ರಾಮ ಪಂಚಾಯಿತಿಯ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.24 ರಂದು ಪಂಚಾಯಿತಿ ಕಟ್ಟಡದ ಸಭಾಭವನದಲ್ಲಿ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್ ಅವರು ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.ಗ್ರಾಮಸ್ಥರ ಆಕ್ರೋಶ: ವೇಣೂರು ರಸ್ತೆಯಲ್ಲಿ ದೊಡ್ಡ ಗಾತ್ರದ ಲಾರಿ, ಟಿಪ್ಪರ್ಗಳು ಅತಿಯಾಗಿ ಸಂಚರಿಸುತ್ತಿದ್ದು, ರಸ್ತೆಗಳು ಗುಂಡಿ ಬಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಕ್ರಮ ಕೈಗೊಳ್ಳದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.


ವೇಣೂರು ಮುಖ್ಯ ಸೇತುವೆ ಕುಸಿಯುವ ಭೀತಿಯಲ್ಲಿದೆ, ಕೂಡಲೇ ದುರಸ್ತಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಕಳೆದ 15 ವರ್ಷಗಳಿಂದ ಗ್ರಾಮ ಸಭೆಯಲ್ಲಿ ಪ್ರಾಥಮಿಕ ಶಾಲೆಗೆ ಮನವಿ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಮುಂದಿನ ಗ್ರಾಮ ಸಭೆಗೆ ಕಡ್ಡಾಯವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬರಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಉಮೇಶ್ ಎನ್, ಸದಸ್ಯರಾದ ಶುಭ, ಸುಚಿತ್ರ, ನೇಮಯ್ಯ ಕುಲಾಲ್, ಸಂಭಾಷಿಣಿ, ವಸಂತಿ, ಅರುಣ್ ಕ್ರಾಸ್ತ, ಲೀಲಾವತಿ, ಲೋಕಯ್ಯ ಪೂಜಾರಿ, ಸುಜಾತಾ, ಸುನಿಲ್ ಕುಮಾರ್ ಪಿ, ಅರುಣ್ ಹೆಗ್ಡೆ, ಮಾಲತಿ, ಸುಮಾ, ಪುಷ್ಪ ಡಿ, ಶೈಲಜಾ, ಜಿನ್ನು, ಸುಂದರ ಹೆಗ್ಡೆ, ಅನೂಪ್ ಜೆ ಪಾಯಸ್, ವೀಣಾ ಉಪಸ್ಥಿತರಿದ್ದರು.ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿದರು, ರಾಜು ವರದಿ ವಾಚಿಸಿದರು, ನಾರಾಯಣಪ್ಪ ವಂದಿಸಿದರು. ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.









