ಬೆಳಾಲು ಸಂಜೀವಿನಿ ಒಕ್ಕೂಟದ ಮಹಾಸಭೆ

0

ಬೆಳಾಲು :ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ. 25ರಂದು ನಾಗಾಂಬಿಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟ ರಿ. ಬೆಳಾಲು ಇದರ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷ ಶಾರದಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಂಜೀವಿನಿ ಧ್ಯೇಯಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕೃಷಿ ಸಖಿ ಸ್ವಾತಿ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಹಾಗೂ ಸಂಜೀವಿನಿ ಒಕ್ಕೂಟಕ್ಕೆ NRLM ಶೆಡ್ ನಿರ್ಮಾಣದ ಕುರಿತು ಭರವಸೆ ನೀಡಿದರು. CHO ತೇಜಾವತಿ ಮಹಿಳೆಯರಿಗೆ ಆರೋಗ್ಯದ ಬಗ್ಗೆ, ಗರ್ಭಕೋಶ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು.

ಎಂಬಿಕೆ ಹರಿಣಾಕ್ಷಿ ಒಕ್ಕೂಟದ ವಾರ್ಷಿಕ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿ ಸರ್ವ ಸದಸ್ಯರಿಂದ ಅನುಮೋದನೆ ಪಡೆಯಲಾಯಿತು.

LCRP ಸರಸ್ವತಿ 226 27 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯನ್ನು ಮಂಡಿಸಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸದಸ್ಯರಿಗೆ ಸಮುದಾಯ ಬಂಡವಾಳ ನಿಧಿ ವಿತರಣೆ ಹಾಗೂ ಬಳಕೆ, ಲೋಕೋಸ್ ತಂತ್ರಾಂಶದಲ್ಲಿ ಸದಸ್ಯರ ಹಾಗೂ ಸಂಘದ ಮಾಹಿತಿ ಸೇರ್ಪಡೆ ಮಾಡುವ ಬಗ್ಗೆ, ಸಂಜೀವಿನಿ ಯೋಜನೆಯ ಉದ್ದೇಶದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಮುಂದೆ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ನಡೆಸಿಕೊಟ್ಟರು. ಸಂಘದ ಸದಸ್ಯರಿಗೆ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿಕೊಟ್ಟರು.

ಪುಷ್ಪಗುಚ್ಚ ಸ್ಪರ್ಧೆಯನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲಾಯಿತು. ನಿರ್ಗಮಿತ ಪದಾಧಿಕಾರಿಗಳನ್ನು ಕಿರು ಕಾಣಿಕೆ ನೀಡಿ ಗೌರವಿಸಲಾಯಿತು. ಒಕ್ಕೂಟದ ಸಿಬ್ಬಂದಿಗಳಿಗೆ ಪದಾಧಿಕಾರಿಗಳು ಸೇರಿ ಸನ್ಮಾನಿಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ ಇವರಿಗೆ ಹಾಗೂ ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೈನ್ ಇವರಿಗೆ ಒಕ್ಕೂಟದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಅಧ್ಯಕ್ಷರಾದ ಶಾರದ ಇವರು ತಮ್ಮ ಅನುಭವಗಳನ್ನು ಹಂಚಿಕೊಂಡು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಎಲ್ ಸಿ ಆರ್ ಪಿ ಗೀತಾ ಧನ್ಯವಾದ ನೀಡಿದರು. ಕುಮಾರಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಒಕ್ಕೂಟದ ಸಿಬ್ಬಂದಿಗಳಾದ ಪಶು ಸಖಿ ಯಶೋಧ, ಭೀಮಸಖಿ ಲತಾ, ಬಿ ಸಿ ಸಖಿ ದಿವ್ಯ, ಸ್ವಚ್ಛ ಘಟಕದ ವಾಹನ ಚಾಲಕಿ ಮಾಯಾ ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಕಾರ್ಯಕ್ರಮಕ್ಕೆ ಸಹಕರಿಸಿದರು. ಎಲ್ಲಾ ಸಂಘದಿಂದ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here