ಸರಕಾರ ಮಾಡಲಾಗದ ಸಾಧನೆಯನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳು ಮಾಡಿವೆ : ಭೋಜೆ ಗೌಡ: ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ನೂತನ ಮಹಾದ್ವಾರ ಉದ್ಘಾಟನೆ

0

ಗುರುವಾಯನಕೆರೆ : ಇಲ್ಲಿನ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ನೂತನ ಅರಮಲೆಬೆಟ್ಟ ಕ್ಯಾಂಪಸ್‌ನ ಭವ್ಯ ಮಹಾದ್ವಾರದ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನೆರವೇರಿತು.ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೇಗೌಡ ಅವರು ನೂತನ ಮಹಾದ್ವಾರವನ್ನು ಅಧಿಕೃತವಾಗಿ ಉದ್ಘಾಟಿಸಿ, “ಸರಕಾರ ಮಾಡಲು ಅಸಾಧ್ಯವಾದ ಶೈಕ್ಷಣಿಕ ಸಾಧನೆಯನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳು ಸಾಧಿಸಿ ತೋರಿಸಿವೆ. ಗುಣಮಟ್ಟದ ಶಿಕ್ಷಣದ ಮೂಲಕ ಎಕ್ಸೆಲ್ ರಾಜ್ಯ- ರಾಷ್ಟ್ರದ ಗಮನ ಸೆಳೆದಿದೆ” ಎನ್ನುತ್ತಾ ಸಂಸ್ಥೆಯ ಶೈಕ್ಷಣಿಕ ಪ್ರಗತಿ ಹಾಗೂ ವಿದ್ಯಾರ್ಥಿ ಸ್ನೇಹಿ ಮೂಲಸೌಕರ್ಯಗಳನ್ನು ಶ್ಲಾಘಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರು ಮಮತಾ ಗಟ್ಟಿ, ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ವಿಠ್ಠಲ್, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪ್ರೇಮನಾಥ್ ಶೆಟ್ಟಿ, ರಾಜ್ಯಾಧ್ಯಕ್ಷರಾದ ಚೌಡಪ್ಪ ಅವರು ಉಪಸ್ಥಿತರಿದ್ದು ಸಂಸ್ಥೆಯ ಬೆಳವಣಿಗೆಗೆ ಬೆಂಬಲ ಸೂಚಿಸಿದರು.

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಆರ್., ಕಾರ್ಯಾಧ್ಯಕ್ಷರಾದ ಹರಿಪ್ರಕಾಶ್ ಮತ್ತು ಸಂಘಟನೆಯ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ. ಅವರು ವಹಿಸಿದ್ದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ ಹಾಗೂ ಶ್ರೀಮತಿ ಸುಮಿತ್ರಾ ಗೌಡ , ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ , ಉಪ ಪ್ರಾಂಶುಪಾಲರಾದ ರೋಹಿತ್, ಹರೀಶ್ , ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ಆಡಳಿತಾಧಿಕಾರಿ ಕೀರ್ತಿನಿಧಿ, ವ್ಯವಸ್ಥಾಪಕರಾದ ಪ್ರಶಾಂತ್ ಬಳಂಜ ಮೊದಲಾದವರು ಉಪಸ್ಥಿತರಿದ್ದರು.ಈ ಸಂಭ್ರಮದ ಕ್ಷಣದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here