






ಬೆಳ್ತಂಗಡಿ (ಸೆ. 28): ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ ಮತ್ತು ಭಂಡಾರಿ ಯುವವೇದಿಕೆ ವತಿಯಿಂದ, ಇತ್ತೀಚೆಗೆ ‘ಉತ್ತಮ ಶಾಸಕ’ ಪುರಸ್ಕಾರಕ್ಕೆ ಭಾಜನರಾದ ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಗೌರವಾರ್ಪಣೆ ಸಲ್ಲಿಸಲಾಯಿತು


.ಜೊತೆಗೆ, ಬರುವ ಅಕ್ಟೋಬರ್ 20 ರಂದು ಉಜಿರೆಯಲ್ಲಿ ನಡೆಯಲಿರುವ ಭಂಡಾರಿ ಸಮಾಜದ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ನೀಡಿ, ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಪೂವಪ್ಪ ಭಂಡಾರಿ ಮದ್ದಡ್ಕ, ಯುವವೇದಿಕೆ ಅಧ್ಯಕ್ಷ ಪ್ರಶಾಂತ್ ಭಂಡಾರಿ ಅಂಡಿಂಜೆ, ಸಮಾಜದ ಹಿರಿಯರಾದ ಏ. ಪೂವಪ್ಪ ಭಂಡಾರಿ ಪಣೆಜಾಲು ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.









