






ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ವತಿಯಿಂದ 2026-27ನೇ ಸಾಲಿನ “ಭಿತ್ತಿಪತ್ರ” ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಂಸ್ಥೆಯ ಗುರುದೇವ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ವೇದಿಕೆಯಲ್ಲಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಸಮೀವುಲ್ಲಾ, ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ಸಂಯೋಜಕರಾದ ಇಂಗ್ಲಿಷ್ ಭಾಷಾ ಉಪನ್ಯಾಸಕಿ ಸುವರ್ಣ ಪೈ ಹಾಗೂ ಕನ್ನಡ ಭಾಷಾ ಉಪನ್ಯಾಸಕಿ ಸತೀಶ್ ಸಿ. ಸಾಲ್ಯಾನ್ ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ವೃಂದದವರು, ಕಚೇರಿ ಸಿಬ್ಬಂದಿ ಹಾಗೂ ಸಮಸ್ತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ಕಾರ್ಯಕ್ರಮದ ಆರಂಭದಲ್ಲಿ ತೃತೀಯ ಬಿ.ಕಾಮ್ ವಿದ್ಯಾರ್ಥಿನಿ ತಶ್ರೀಫಾ ಎಲ್ಲರನ್ನು ಸ್ವಾಗತಿಸಿದರು.
ತೃತೀಯ ಬಿ.ಎ ವಿದ್ಯಾರ್ಥಿನಿ ಆಯಿಷಾ ಕಾರ್ಯಕ್ರಮವನ್ನು ನಿರೂಪಿಸಿ, ಅಂತಿಮವಾಗಿ ತೃತೀಯ ಬಿ.ಎ ವಿದ್ಯಾರ್ಥಿನಿ ನಂದಿನಿ ವಂದನಾರ್ಪಣೆಗೈದರು.









