






ಕಡಿರುದ್ಯಾವರ: ಸರಸ್ವತಿಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಕಡಿರುದ್ಯಾವರ ಇದರ ವಾರ್ಷಿಕ ಮಹಾಸಭೆಯು ಕಡಿರುದ್ಯಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ. 22 ರಂದು ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸುರೇಖಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯು ಪ್ರಾರ್ಥನೆಯೊಂದಿಗೆ ಆರಂಭವಾಯಿತು. LCRP ಸುಮಿತ್ರಾ ಅವರು ಆಗಮಿಸಿದ ಎಲ್ಲ ಗಣ್ಯರನ್ನು ಹಾಗೂ ಸದಸ್ಯರನ್ನು ಸ್ವಾಗತಿಸಿದರು. ಬಳಿಕ ವೇದಿಕೆಯಲ್ಲಿದ್ದ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಜಯಾನಂದ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಸಂಜೀವಿನಿ ಯೋಜನೆಯಿಂದ ಮಹಿಳೆಯರು ಹೇಗೆ ಸ್ವಾವಲಂಬಿ ಜೀವನವನ್ನು ನಡೆಸಬಹುದು ಮತ್ತು ಒಕ್ಕೂಟ ರಚನೆಯ ಮುಖ್ಯ ಉದ್ದೇಶ ಹಾಗೂ ಯೋಜನೆಯ ಧ್ಯೇಯೋದ್ದೇಶಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು.


MBK ಸುಪ್ರಿಯ ಅವರು 2025-26ನೇ ಸಾಲಿನ ಒಕ್ಕೂಟದ ವಾರ್ಷಿಕ ವರದಿ ಹಾಗೂ ಜಮೆ-ಖರ್ಚಿನ ವಿವರಗಳನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ಎಲ್ಲರೂ ಒಮ್ಮತದಿಂದ ಚರ್ಚಿಸಿ ವರದಿಗೆ ಅನುಮೋದನೆ ನೀಡಿದರು. ಪಂಚಾಯತ್ ಕಾರ್ಯದರ್ಶಿ ಜರ್ನಾಧನ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಒಕ್ಕೂಟದ ಮುಂದಿನ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಲೋಕೇಶ್ವರಿ ಹಾಗೂ ವಲಯ ಮೇಲ್ವಿಚಾರಕರಾದ ಜಯಾನಂದ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಂತರ CHO ಅವರು ಆರೋಗ್ಯದ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಸಭೆಗೆ ಆಗಮಿಸಿದ ಎಲ್ಲ ಸದಸ್ಯರಿಗೂ ಬಿ.ಪಿ. (ರಕ್ತದೊತ್ತಡ) ಹಾಗೂ ಶುಗರ್ (ಮಧುಮೇಹ) ತಪಾಸಣೆ ನಡೆಸಲಾಯಿತು.
ಒಕ್ಕೂಟದ ಅಧ್ಯಕ್ಷರು ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಭವಿಷ್ಯ ರಾಣಿ ನಿರೂಪಿಸಿದರು. LCRP ಸುಮನಾ ಅವರು ವಂದನಾರ್ಪಣೆ ಸಮರ್ಪಿಸಿದರು









