ಮೌಲ್ಯ ನಾಯಕ್ ಗೆ ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ

0

ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿನಿ ಮೌಲ್ಯ ನಾಯಕ್ ಅವರು 2025ರಲ್ಲಿ ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ಪಡೆದಿದ್ದಾರೆ. 2024-25 ರಲ್ಲಿಯೂ ಕೂಡ ಇವರು ಸ್ವರ್ಣ ಪದಕ ಪಡೆದಿದ್ದರು.

ಇವರು ಬೆಳ್ತಂಗಡಿ ತಾಲೂಕಿನ ಕಡಿದುದ್ಯಾವರ ಗ್ರಾಮದ ಬಾಲಚಂದ್ರ ನಾಯಕ್ ಹಾಗೂ ಲಲಿತಾ ನಾಯಕ್ ದಂಪತಿಯ ಪುತ್ರಿ. ಇವರ ಈ ಮಹತ್ತರ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ್ ಐತಾಳ್ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here