






ಕಳೆಂಜ: ಇತ್ತೀಚೆಗೆ ಮೃತರಾದ ಕಳೆಂಜ ಗ್ರಾಮದ ಕಾಯರ್ತಡ್ಕ ಅಂಗರಂಡ ನಿವಾಸಿ, ಗ್ರಾಮದ ಗುತ್ತು ಗೌಡರಾದ ದಿ. ಐತಪ್ಪ ಗೌಡ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಮೃತರ ಪತ್ನಿ, ಮಗ ಬೆಳ್ತಂಗಡಿ ಮಂಡಲ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ಯೋಗೀಶ್ ಗೌಡ ಹಾಗೂ ಕುಟುಂಬಸ್ಥರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಮನ್ ಕಿ ಬಾತ್ ಸಂಚಾಲಕ ಸೀತಾರಾಮ್ ಬಿ.ಎಸ್. ಬೆಳಾಲು, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಗೌಡ ಕೊಯಿಲ, ಮಂಡಲ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ, ಮಂಡಲ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಖ್ಯಾರ್, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ್ ಗೌಡ ನಿಡ್ಡಾಜೆ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್ ಗೌಡ ಡೆಚ್ಚಾರು, ಪುದುವೆಟ್ಟು ಮಿಲ್ಕ್ ಸೊಸೈಟಿ ಅಧ್ಯಕ್ಷ ವಿಜಯ ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.









