ಫಂಡಿಜೆವಾಳ್ಯ ಶಾಲೆಯಲ್ಲಿ ರೇಬಿಸ್ ರೋಗ ಜಾಗೃತಿ ಕಾರ್ಯಕ್ರಮ

0

ಫಂಡಿಜೆವಾಳ್ಯ, ಸೆಪ್ಟೆಂಬರ್ 29, 2026: ಸ.ಹಿ.ಪ್ರಾ. ಶಾಲೆ ಫಂಡಿಜೆವಾಳ್ಯದಲ್ಲಿ ರೇಬಿಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ವೇಣೂರು ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ ಡಾ. ಸದಾಶಿವ ಭಟ್ ಅವರು ರೇಬಿಸ್ ರೋಗದ ಕಾರಣಗಳು, ಹರಡುವ ವಿಧಾನ, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗದಿಂದ ರಕ್ಷಿಸಿಕೊಳ್ಳುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಸಾಕುಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸುವುದು ಮತ್ತು ಅವುಗಳ ಆರೈಕೆಯ ಮಹತ್ವವನ್ನು ತಿಳಿಸಿದರು.ಶಾಲೆಯ ಮುಖ್ಯ ಶಿಕ್ಷಕಿ ಫ್ಲೇವಿಯಾ ಡಿಸೋಜಾ ಅವರು ಮಾತನಾಡಿ, “ರೇಬಿಸ್ ರೋಗದ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಪ್ರಾಣಿಗಳೊಂದಿಗೆ ಸುರಕ್ಷಿತವಾಗಿ ವರ್ತಿಸುವುದು, ಯಾವುದೇ ಅನುಮಾನಾಸ್ಪದ ಘಟನೆ ಸಂಭವಿಸಿದಲ್ಲಿ ತಕ್ಷಣವೇ ಹಿರಿಯರಿಗೆ ತಿಳಿಸುವುದು ಹಾಗೂ ಅಗತ್ಯ ವೈದ್ಯಕೀಯ ನೆರವು ಪಡೆಯುವುದು ಬಹಳ ಮುಖ್ಯ” ಎಂದು ತಿಳಿಸಿದರು.

ಮುಖ್ಯ ಶಿಕ್ಷಕಿಯವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದ ಡಾ. ಸದಾಶಿವ ಭಟ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ವಿದ್ಯಾರ್ಥಿಗಳಲ್ಲಿ ರೇಬಿಸ್ ರೋಗದ ಕುರಿತು ಅರಿವು ಮೂಡಿಸುವಲ್ಲಿ ಕಾರ್ಯಕ್ರಮವು ಸಹಾಯಕವಾಯಿತು.

LEAVE A REPLY

Please enter your comment!
Please enter your name here