ಸರ್ವಾಂಗಾಸನದಲ್ಲಿ ವಿಶ್ವ ದಾಖಲೆ: ಬೆಳ್ತಂಗಡಿಯ ಯೋಗ ಪಟು ವಿಕಾಸ್‌ಗೆ ಮಾನ್ಯತೆ

0

ಮೂಡುಬಿದಿರೆ: ಸರ್ವಾಂಗಾಸನದಲ್ಲಿ ನಿರಂತರವಾಗಿ ಆಸನ ನಿರ್ವಹಿಸಿದ ಸಾಧನೆಗಾಗಿ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್‌ನ ತೃತೀಯ ವರ್ಷದ ವಿದ್ಯಾರ್ಥಿ ಪಿ.ಕೆ. ವಿಕಾಸ್ ಅವರು ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

ಬೆಳ್ತಂಗಡಿ ಮೂಲದ ವಿಕಾಸ್ 5ನೇ ತರಗತಿಯಿಂದಲೇ ಯೋಗಾಭ್ಯಾಸ ಆರಂಭಿಸಿದ್ದು, ಕಳೆದ 11 ವರ್ಷಗಳಿಂದ ನಿರಂತರ ಅಭ್ಯಾಸ ಮಾಡುತ್ತಿದ್ದಾರೆ. ಸರ್ವಾಂಗಾಸನ ಪ್ರದರ್ಶನದಲ್ಲಿ ಸಮತೋಲನ, ದೈಹಿಕ ಸಾಮರ್ಥ್ಯ, ನಮ್ಯತೆ, ಸ್ಥಿರತೆ, ಏಕಾಗ್ರತೆ ಹಾಗೂ ಸಹನಶಕ್ತಿಯನ್ನು ಸಮರ್ಥವಾಗಿ ಪ್ರದರ್ಶಿಸಿರುವುದಾಗಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.ಯೋಗ ಕ್ಷೇತ್ರದಲ್ಲಿ ಹಲವು ಸಾಧನೆ ಮಾಡಿರುವ ವಿಕಾಸ್, 2023, 2024 ಹಾಗೂ 2025ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಯೋಗ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

2022ರ ಡಬ್ಲ್ಯುಎಫ್‌ಎಫ್ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.2024ರಲ್ಲಿ ನವದೆಹಲಿಯ ಏಮ್ಸ್‌ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 2025ರಲ್ಲಿ ನಡೆದ ಎಯಾನ್ ವೈದ್ಯಕೀಯ ಸಂಸ್ಥೆಯ ರಾಷ್ಟ್ರೀಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 2017, 2018ರಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ, 2021ರಲ್ಲಿ ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದರು.

ಯೋಗ ಸ್ಪರ್ಧೆಗಳ ತೀರ್ಪುಗಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.ಇವರು ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪಂರ್ದಗುತ್ತು ಕೃಷ್ಣಪ್ಪ ಪೂಜಾರಿ ಹಾಗೂ ಬಾರ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶೀಲಾ ಎಸ್. ಅವರ ಪುತ್ರ.

LEAVE A REPLY

Please enter your comment!
Please enter your name here