ವಲಯ ಮಟ್ಟದ ಅಥ್ಲೆಟಿಕ್ಸ್: ಶಿಶಿಲ ವಾಲ್ಮೀಕಿ ವಸತಿ ಶಾಲೆಯ ಕಾವ್ಯಾಗೆ ಮೂರು ಪ್ರಶಸ್ತಿ

0

ನಿಡ್ಲೆ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026–27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್‌ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್‌ನಲ್ಲಿ ಶಿಶಿಲದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿನಿ ಕಾವ್ಯಾ ಮೂರು ಪ್ರಶಸ್ತಿಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

ಕಾವ್ಯಾ 600 ಮೀಟರ್ ಹಾಗೂ 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು 200 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಇದೇ ಕ್ರೀಡಾಕೂಟದಲ್ಲಿ ಶಾಲೆಯ ಬಾಲಕಿಯರ ತಂಡವು 4×100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಸಾಧನೆಗೈದ ವಿದ್ಯಾರ್ಥಿನಿಯರು ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದಕ್ಕೆ ಪೋಷಕರು ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here