ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ಉಜಿರೆ, ಅ. 2 ರಂದು ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ನಡೆಯಿತು. ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಮಹನೀಯರ ಆದರ್ಶ, ಸರಳತೆ, ಸತ್ಯ, ಅಹಿಂಸೆ ಹಾಗೂ ದೇಶಭಕ್ತಿಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ತರಗತಿವಾರು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಪ್ರಿಯದರ್ಶಿನಿ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ, ಆದರ್ಶಗಳು ಮತ್ತು ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಮಾತನಾಡಿದರು. ಮಹನೀಯರ ಜೀವನಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.ವಿದ್ಯಾರ್ಥಿನಿ ರಚನಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here