






ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದ.ಕ. ಜಿಲ್ಲೆ ಮತ್ತುಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ದ.ಕ. ಜಿಲ್ಲೆಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ನವಜೀವನ ಸಾಧನಾ ಸಮಾವೇಶ ಅ. 2 ರಂದು ಧರ್ಮಸ್ಥಳದ ಅಮೃತ ವರ್ಷಿಣಿ ಸಭಾ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿದರು.ಮಾಣಿಲ ಶ್ರೀ ಧಾಮದ ಮೋಹನದಾಸ್ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರು ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ, ಜಿಲ್ಲಾ ಸಂಘಟನಾ ಅಧ್ಯಕ್ಷ ಪ್ರಕಾಶ್ ಕಾರಂತ್ ಭಾಗವಹಿಸಿದ್ದರು. ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್, ಸಮಾಜ ಸೇವಕರು ಮುಂಬೈ ಆರ್. ಬಿ. ಹೆಬ್ಬಳ್ಳಿ, ಶ್ರೀ ಕ್ಷೇ. ಧ. ಗ್ರಾ.ಯೋ. ಬಿ.ಸಿ. ಟ್ರಸ್ಟ್ ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಗಿರೀಶ್ ಕೆ. ಎಸ್., ಮೂಡಬಿದ್ರೆ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಾಸುದೇವ ನಾಯಕ್, ಮಂಗಳೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷೆ ಸುಖಲತಾ ಶೆಟ್ಟಿ, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜಾರಾಮ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್ ಆಶಯ ನುಡಿ ಮಾತನಾಡಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಕಾರ್ಯದರ್ಶಿ ವಿವೇಕ್ ವಿ. ಪಾಯಿಸ್ ಪ್ರಸ್ತಾವನೆಯೊಂದಿಗೆ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿದರು.ಉಡುಪಿ ಕರಾವಳಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ವಂದಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.ಕೇಶವ ಚಾರ್ಮಾಡಿ, ಸುಕನ್ಯಾ ಗಜಾನಂದ ಅನಿಸಿಕೆ ವ್ಯಕ್ತ ಪಡಿಸಿದರು.ಉಜಿರೆ ಎಸ್ ಡಿ ಎಂ ಕಾಲೇಜು ಕಲಾ ವಿದ್ಯಾರ್ಥಿಗಳು ಪ್ರಾರ್ಥನೆ ಗೈದರು.
ನವಜೀವನ ಸದಸ್ಯರನ್ನು ಶಾಲು ಹೊದಿಸಿ ಗೌರವಿಸಲಾಯಿತು.25 ಕ್ಕೂ ಮಿಕ್ಕಿ ನವಜೀವನ ನಡೆಸುತ್ತಿರುವ ಹಿರಿಯ ಸದಸ್ಯರು ಡಾ. ಹೆಗ್ಗಡೆಯವರನ್ನು ಗೌರವಿಸಿದರು.









