






ಬೆಳ್ತಂಗಡಿ : ಅಕ್ಟೋಬರ್ 24 ಮತ್ತು 25ನೇ ತಾರೀಖಿನಂದು ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆಯಲ್ಲಿ 12ನೆಯ ಜಿಲ್ಲಾ ಗಮಕ ಸಮ್ಮೇಳನವು ನಡೆಯಲಿದ್ದು, ಅದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ನಮ್ಮ ಸಂಸ್ಕೃತಿ, ಸಾಹಿತ್ಯ, ಕಲಾಪ್ರಕಾರವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿ ಗಮಕ ಜಿಲ್ಲಾ ಸಮ್ಮೇಳನಕ್ಕೆ ಯಶಸ್ಸನ್ನು ಹಾರೈಸಿದರು.


ಈ ಸಂದರ್ಭದಲ್ಲಿ ಗಮಕ ಜಿಲ್ಲಾ ಸಮ್ಮೇಳನ ಸಮಿತಿಯ ಕಾರ್ಯಾಧ್ಯಕ್ಷ ಕರ್ನಾಟಕ ಕಲಾಶ್ರೀ ಪ್ರೊ. ಮಧೂರು ಮೋಹನ ಕಲ್ಲೂರಾಯ , ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಉಜಿರೆ, ಜೊತೆ ಕಾರ್ಯದರ್ಶಿ ರಮೇಶ ಮಯ್ಯ ಉಪಸ್ಥಿತರಿದ್ದರು.









