






ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಭಕ್ತಿ ಹಾಗೂ ಗೌರವದಿಂದ ಆಚರಿಸಲಾಯಿತು.ಶಾಲೆಯ ಮುಖ್ಯೋಪಾಧ್ಯಾಯರಾದ ವಿದ್ಯಾ ಟಿ. ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಬಳಿಕ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಶಿಕ್ಷಕರು ಹಾಗೂ ವಿದ್ಯಾರ್ಥಿ ನಾಯಕರು ಪುಷ್ಪಾರ್ಚನೆ ಸಲ್ಲಿಸಿದರು.ಹಿರಿಯ ಶಿಕ್ಷಕ ಚಂದ್ರಶೇಖರ್ ಭಟ್ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ, ಸರಳತೆ, ದೇಶಪ್ರೇಮ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ಕೈಗೊಂಡ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ ಸ್ವಚ್ಛತೆಯ ಮಹತ್ವವನ್ನು ಸಾರಿದರು.









