ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಂಚಿನ ಪದಕ

0

ಕಕ್ಯಪದವು: ಬಂಟ್ವಾಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರಾವಿತ್ ಪಿ. ಅವರು ಅಡೆತಡೆ ಓಟದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬಿ.ಸಿ.ರೋಡ್‌ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 2ರಂದು ನಡೆದ 14ರಿಂದ 17 ವರ್ಷದೊಳಗಿನ ಬಾಲಕ-ಬಾಲಕಿಯರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

17 ವರ್ಷ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿದ ಶ್ರಾವಿತ್ ಪಿ. ಅವರು ಅಡೆತಡೆ ಓಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು.ವಿದ್ಯಾರ್ಥಿಯ ಈ ಸಾಧನೆಯು ಸಂಸ್ಥೆಗೆ ಹೆಮ್ಮೆ ತಂದಿದ್ದು, ಅವರ ಪರಿಶ್ರಮ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ತರಬೇತಿ ಮತ್ತು ಮಾರ್ಗದರ್ಶನ ಶ್ಲಾಘನೀಯವಾಗಿದೆ.

ವಿದ್ಯಾರ್ಥಿಗೆ ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ. ಹಾಗೂ ಪೃಥ್ವಿರಾಜ್ ಅವರ ಪ್ರಯತ್ನವನ್ನು ಸಂಸ್ಥೆಯು ಪ್ರಶಂಸಿಸಿದೆ. ಸಾಧನೆಗೈದ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here