ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ‘STEP UP 2026’ ಕಾರ್ಯಕ್ರಮಕ್ಕೆ ಚಾಲನೆ

0

ಉಜಿರೆ, ಅ. 3: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರೂಪಿಸಲಾದ ‘STEP UP 2026 – Step Towards Responsible Citizenship’ ಕಾರ್ಯಕ್ರಮಕ್ಕೆ ಅ. 3ರಂದು ಚಾಲನೆ ನೀಡಲಾಯಿತು.

ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ನಾಗರಿಕತ್ವದ ಗುಣಗಳನ್ನು ಬೆಳೆಸುವುದು, ಆತ್ಮವಿಶ್ವಾಸ, ನಾಯಕತ್ವ, ಸಾಮಾಜಿಕ ಕಾಳಜಿ ಹಾಗೂ ಜೀವನ ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅ. 3ರಿಂದ ಅ. 7ರವರೆಗೆ ವಿವಿಧ ಚಟುವಟಿಕೆಗಳು ಹಾಗೂ ತರಬೇತಿ ಕಾರ್ಯಕ್ರಮಗಳು ಶಾಲಾ ಆವರಣದಲ್ಲಿ ನಡೆಯಲಿವೆ.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಎಸ್. ಎನ್. ಕಾಕತ್ಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನೊಂದಿಗೆ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವ ಅಗತ್ಯವನ್ನು ತಿಳಿಸಿ, ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಜವಾಬ್ದಾರಿ, ನಾಯಕತ್ವ ಗುಣ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

STEP UP 2026’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಸಾಮರ್ಥ್ಯಗಳನ್ನು ಅರಿತುಕೊಳ್ಳಲು ಹಾಗೂ ಭವಿಷ್ಯದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಪ್ರೇರಣೆ ನೀಡುವ ವೇದಿಕೆಯಾಗಲಿದೆ. ಶಾಲೆಯ ಪ್ರಾಂಶುಪಾಲರು ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ಈ ಶಿಬಿರದ ಅಧ್ಯಕ್ಷತೆ ವಹಿಸಿರುವರು. ವಿದ್ಯಾರ್ಥಿಗಳಾದ ನಿನಾದ್ ಕಾರ್ಯಕ್ರಮ ನಿರೂಪಿಸಿ, ಆಕಾಶ್ ಸ್ವಾಗತಿಸಿ, ಅತುಲ್ಯ ತೇಜ ವಂದಿಸಿದರು.

LEAVE A REPLY

Please enter your comment!
Please enter your name here