







ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು.
ಇದೇ ಸಂದರ್ಭದಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮಸಭೆ ಹಾಗೂ ಜಿಪಿಡಿಪಿ ಯೋಜನೆಯ ಗ್ರಾಮಸಭೆಯನ್ನು ಪಂಚಾಯಿತಿ ಆಡಳಿತಾಧಿಕಾರಿ ಭರತ್ ಎಲ್. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ವರ್ತಕರೊಂದಿಗೆ ಚರ್ಚಿಸಿ, ಈಗಾಗಲೇ ಅಂಗಡಿಗಳಿಂದ ಸಂಗ್ರಹಿಸುತ್ತಿರುವ ಒಣಕಸದ ಸಂಗ್ರಹಣೆಗೆ ಶುಲ್ಕ ವಿಧಿಸಲು ನಿರ್ಣಯಿಸಲಾಯಿತು.ವಿಬಿಜಿ ರಾಮ್ ಜಿ ಯೋಜನೆಯ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ‘ನಮ್ಮ ಗ್ರಾಮ ನಮ್ಮ ಯೋಜನೆ’ ಕುರಿತು ಸಭೆಗೆ ಮಾಹಿತಿ ನೀಡಲಾಯಿತು.
ಗ್ರಾಮ ಪಂಚಾಯಿತಿ ಸಿಬ್ಬಂದಿ, ಎಂ.ಬಿ.ಕೆ., ಎಲ್.ಸಿ.ಆರ್.ಪಿ. ಹಾಗೂ ಇತರ ಸಖಿಯರು, ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮಾಲೀಕರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ವಂದನಾರ್ಪಣೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.









