ಶಿಶಿಲ ಗ್ರಾ.ಪಂ.ನಲ್ಲಿ ಗಾಂಧಿ ಜಯಂತಿ, ವಿಶೇಷ ಗ್ರಾಮಸಭೆಸ್ವಚ್ಛತಾ ಹೀ ಸೇವಾ ಅಭಿಯಾನ ಸಮಾರೋಪ; ತ್ಯಾಜ್ಯ ನಿರ್ವಹಣೆ ಕುರಿತು ಚರ್ಚೆ

0

ಶಿಶಿಲ: ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಅ.2ರಂದು ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಹೀ ಸೇವಾ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು.

ಇದೇ ಸಂದರ್ಭದಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮಸಭೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆ (ಜಿಪಿಡಿಪಿ) ಕುರಿತ ಗ್ರಾಮಸಭೆಯನ್ನು ನಡೆಸಲಾಯಿತು.

ಪಂಚಾಯಿತಿ ಆಡಳಿತಾಧಿಕಾರಿ ಭರತ್ ಎಲ್. ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಚ್ಛತೆ, ಆರೋಗ್ಯ ಹಾಗೂ ಪಂಚಾಯಿತಿ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು.ಸಭೆಯಲ್ಲಿ ಪಾಲ್ಗೊಂಡ ವರ್ತಕರೊಂದಿಗೆ ಚರ್ಚಿಸಿ, ತಮ್ಮ ಅಂಗಡಿಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಸೂಚಿಸಲಾಯಿತು.

ಪ್ರತಿ ಅಂಗಡಿಯಿಂದ ಒಣಕಸ ಸಂಗ್ರಹಿಸುವ ಕುರಿತು ಅಭಿಪ್ರಾಯಗಳನ್ನು ಪಡೆಯಲಾಯಿತು.ಗ್ರಾಮಸ್ಥರಿಗೆ ವಿಬಿಜಿ ರಾಮ್ ಜಿ ಯೋಜನೆಯ ಕುರಿತು ಮಾಹಿತಿ ನೀಡಿ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ‘ನಮ್ಮ ಗ್ರಾಮ ನಮ್ಮ ಯೋಜನೆ’ ಕುರಿತು ಸಭೆಯಲ್ಲಿ ವಿವರಿಸಲಾಯಿತು.

ಗ್ರಾಮ ಪಂಚಾಯಿತಿ ಸಿಬ್ಬಂದಿ, ಎಂಬಿಕೆ, ಎಲ್‌ಸಿಆರ್‌ಪಿ, ಇತರ ಸಖಿಯರು, ಅಂಗಡಿ ಮಾಲೀಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ವಂದನಾರ್ಪಣೆ ಮತ್ತು ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು..

LEAVE A REPLY

Please enter your comment!
Please enter your name here