






ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆ ಹಾಗೂ ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಮೂಲಕ ಅನುಷ್ಠಾನಗೊಂಡ ಕಾಮಗಾರಿಗಳ 2026-27ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಮತ್ತು ಪರಿಶೋಧನಾ ವಿಶೇಷ ಗ್ರಾಮಸಭೆಯನ್ನು ಅ.6 ರಂದು ನಿಗದಿಪಡಿಸಲಾಗಿತ್ತು.



ನಿಗದಿಯಂತೆ ಬೆಳಿಗ್ಗೆ 10.30ಕ್ಕೆ ಅಧಿಕಾರಿಗಳು ಬಂದಿದ್ದು, ಗ್ರಾಮಸ್ಥರೆಲ್ಲರೂ ಸಭಾಂಗಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಯಾವುದೇ ಮಾಹಿತಿ ನೀಡದೆ ಅಧಿಕಾರಿಗಳು ರಸ್ತೆ ವೀಕ್ಷಣೆಗೆ ಎಂದು ತನ್ನ ಪಾಡಿಗೆ 1ಗಂಟೆಗಳ ಕಾಲ ಯಾವುದೇ ರೀತಿಯ ಮಾಹಿತಿಯನ್ನು ನೀಡದೇ ಹೊರಟು ಹೋದರು.

ಇದರಿಂದ ಕೆರಳಿದ ಗ್ರಾಮಸ್ಥರು ಗ್ರಾಮಸಭೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು. ಸಭೆಯನ್ನು ಬಹಿಷ್ಕಾರ ಮಾಡಿ ಹೊರಟು ಹೋದರು.ಅಂತಿಮವಾಗಿ ಗ್ರಾಮಸಭೆಯನ್ನು ರದ್ದುಗೊಳಿಸಲಾಯಿತು. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.









