ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ತಾರತಮ್ಯ: SDPI ನಿಯೋಗದಿಂದ ತಹಸಿಲ್ದಾರರಿಗೆ ದೂರು

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿರುವ ಮೀಸಲಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಿಯೋಗವು ಬೆಳ್ತಂಗಡಿ ತಹಸಿಲ್ದಾರರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.

ಗ್ರಾಮ ಪಂಚಾಯತ್ ಚುನಾವಣೆಯ ಮೀಸಲಾತಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶದ ತತ್ವಗಳನ್ನು ಸಮರ್ಪಕವಾಗಿ ಪಾಲಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಬೇಕು. ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಸಮುದಾಯಗಳಿಗೆ ನ್ಯಾಯಸಮ್ಮತ ಪ್ರಾತಿನಿಧ್ಯ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿತು.

ಮೀಸಲಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅನ್ಯಾಯ ಅಥವಾ ತಾರತಮ್ಯ ನಡೆದಿದ್ದರೆ ಅದನ್ನು ಪರಿಶೀಲಿಸಿ, ನಿಯಮಾನುಸಾರ ಸೂಕ್ತ ತಿದ್ದುಪಡಿ ಕ್ರಮ ಕೈಗೊಳ್ಳಬೇಕು ಹಾಗೂ ಅರ್ಹ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು SDPI ನಿಯೋಗ ತಹಸಿಲ್ದಾರರಿಗೆ ಮನವಿ ಮಾಡಿತು.

ಈ ಸಂದರ್ಭದಲ್ಲಿ SDPI ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಕುವೆಟ್ಟು ಬ್ಲಾಕ್ ಅಧ್ಯಕ್ಷ ಹಂಝರಾಲಿ, ಸುನ್ನತ್ ಕೆರೆ ಬ್ರಾಂಚ್ ಅಧ್ಯಕ್ಷ ಕಲಂದರ್ ಬಿ.ಎಚ್. ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಸಮೀರ್ ಎಸ್.ಕೆ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here