






ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಉಜಿರೆಯ ವರ್ತಕರು ಮತ್ತು ವರ್ತಕರ ಕುಟುಂಬದವರು ಒಂದು ಕಾರ್ಯಕ್ರಮ ದಡಿಯಲ್ಲಿ ಜೊತೆಗೂಡುವ ನಿಟ್ಟಿನಲ್ಲಿ ಅ. 10ರಂದು ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಉಜಿರೆ ವರ್ತಕರ ಕುಟುಂಬ ಮಿಲನ 2026 ನಡೆಯಲಿದೆ.
ಕಾರ್ಯಕ್ರಮವನ್ನು ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಸಂಘದ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯರು ಉದ್ಘಾಟನೆ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಪ್ರಸಾದ್ ಬಿ. ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.ಮಧ್ಯಾಹ್ನ ನಡೆಯಲಿದರುವ ಸಭಾ ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧ. ಮ. ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕ ಡಾ. ರವೀಶ್ ಪಡುಮಲೆ ದಿಕ್ಸುಸಿ ಭಾಷಣ ಮಾಡಲಿದ್ದಾರೆ.


ಶಾಸಕ ಹರೀಶ್ ಪೂಂಜ, ಜಿಲ್ಲಾ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷರು ಸಿ. ಕೆ. ರೋಹಿಣಿ, ಬೆಳ್ತಂಗಡಿ ಸಂಚಾಲರಿ ಪೊಲೀಸ್ ಉಪನಿರೀಕ್ಷ ಕಿಶೋರ್ ಕುಮಾರ್, ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಶಶಿಧರ ಪೈ ಉಜಿರೆ ಸಂಘದ ನಿಕಟ ಪೂರ್ವ ಅಧ್ಯಕ್ಷ ಅರವಿಂದ ಕಾರಂತ್ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಸನ್ಮಾನ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ವರ್ತಕರ ಕುಟುಂಬದ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಮತ್ತು ತಿಂಡಿ ತಿನಿಸುಗಳ ಮೇಳ ನಡೆಯಲಿದೆ.
ಈ ಸಂದರ್ಭದಲ್ಲಿ ಉಜಿರೆಯ ಪ್ರತಿಭಾನ್ವಿತ ನೃತ್ಯ ತಂಡಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ. ಎಸ್. ತಿಳಿಸಿದ್ದಾರೆ.









