ಕಳಿಯ: ಎರುಕಡಪ್ಪು ಅಂಗನವಾಡಿ ಕೇಂದ್ರಕ್ಕೆ ತಾ.ಪಂ ಇಓ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ: ರಸ್ತೆ, ಮೂಲಸೌಕರ್ಯ ಪರಿಶೀಲನೆ

0

ಕಳಿಯ: ಗ್ರಾಮ ಪಂಚಾಯತ್ ವ್ಯಾಪ್ತಿಯ ಎರುಕಡಪ್ಪು ಅಂಗನವಾಡಿ ಕೇಂದ್ರಕ್ಕೆ ತೆರಳುವ ಸಂಪರ್ಕ ರಸ್ತೆ ಸಮಸ್ಯೆ, ಚರಂಡಿ ದುರಸ್ತಿ ಹಾಗೂ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಅವರು ಅ.6ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಬಳಿ ಇರುವ ವಿದ್ಯುತ್ ಕಂಬಗಳ ಸಮಸ್ಯೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಅವುಗಳನ್ನು ಸ್ಥಳಾಂತರಿಸಿ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಅಂಗನವಾಡಿ ಕೇಂದ್ರದ ಹಳೆಯ ಕಟ್ಟಡದ ಬಗ್ಗೆಯೂ ಮಾಹಿತಿ ಪಡೆದರು.ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಪುಟಾಣಿಗಳೊಂದಿಗೆ ಬೆರೆತು, ಅವರ ಯೋಗಕ್ಷೇಮ ವಿಚಾರಿಸಿ ಕೆಲ ಸಮಯ ಕಳೆದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞಿ ಕೆ., ಸಿಬ್ಬಂದಿ ರವಿ ಎಚ್., ಅಂಗನವಾಡಿ ಸಹಾಯಕಿ ಭವ್ಯ, ಗ್ರಾಮಸ್ಥರಾದ ದಿನೇಶ್ ಕಲ್ಕುರ್ಣಿ, ಲೋಹಿತಾಶ್ವ ಹಾಗೂ ಅಂಗನವಾಡಿ ಕಾರ್ಯಕರ್ತೆ ಗುಣಾವತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here