






ವಾಣಿ ಪದವಿ ಪೂರ್ವ ಕಾಲೇಜು, ಹಳೆಕೋಟೆ, ಬೆಳ್ತಂಗಡಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (NSS)ಯ ವಾರ್ಷಿಕ ವಿಶೇಷ ಶಿಬಿರ–2026ವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆ, ಪೆರ್ಲ ಬೈಪಾಡಿ ಇಲ್ಲಿ ಅಕ್ಟೋಬರ್ 11ರಿಂದ 17ರವರೆಗೆ ನಡೆಯಲಿದೆ.
ಶಿಬಿರದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ನೆರವೇರಿಸಲಿದ್ದು, ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಶಿಬಿರದಲ್ಲಿ NSS ಸ್ವಯಂಸೇವಕರಿಗೆ ಸಮಾಜಮುಖಿ ಚಟುವಟಿಕೆಗಳು, ಜಾಗೃತಿ ಕಾರ್ಯಕ್ರಮಗಳು, ತರಬೇತಿ ಹಾಗೂ ವಿವಿಧ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.
ಈ ಕುರಿತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ.











