ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

0

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ, ಉಜಿರೆ ವತಿಯಿಂದ 4ನೇ ತರಗತಿಯಿಂದ 7ನೇ ತರಗತಿಯವರೆಗಿನ ಬಾಲಕಿಯರಿಗಾಗಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಅಕ್ಟೋಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಫಾದರ್ ಪತ್ರಾವೊ ಆಸ್ಪತ್ರೆ, ಪುತ್ತೂರು ಇದರ ಡಾ. ಸಿ. ಜ್ವಾನ ಸಿಕ್ವೇರಾ, MBBS, MS (ಜನರಲ್ ಸರ್ಜರಿ) ಅವರು ಭಾಗವಹಿಸಿ, ಬಾಲಕಿಯರ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ನೈರ್ಮಲ್ಯ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.ವಿದ್ಯಾರ್ಥಿನಿಯರು ತಮ್ಮ ದೈನಂದಿನ ಜೀವನದಲ್ಲಿ ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.

ಆರೋಗ್ಯಕರ ಅಭ್ಯಾಸಗಳನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳುವುದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, ಆರೋಗ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ಫಾ. ಡಾ. ವಿಜಯ್ ಲೋಬೊ ವಹಿಸಿದ್ದರು. ಸಿಸ್ಟರ್ ಮೇರಿ ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಸಮರ್ಪಣೆಯನ್ನು ಶಿಕ್ಷಕಿ ತೇಜಸ್ವಿ ನಿರ್ವಹಿಸಿದರು.

4ರಿಂದ 7ನೇ ತರಗತಿಯ ಬಾಲಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಹತ್ವದ ಮಾಹಿತಿಯನ್ನು ಪಡೆದುಕೊಂಡರು.

ವಿದ್ಯಾರ್ಥಿನಿಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಹಾಗೂ ಸ್ವಚ್ಛತೆ ಮತ್ತು ನೈರ್ಮಲ್ಯದ ಮಹತ್ವವನ್ನು ತಿಳಿಸಿಕೊಡುವಲ್ಲಿ ಕಾರ್ಯಕ್ರಮವು ಯಶಸ್ವಿಯಾಯಿತು.

LEAVE A REPLY

Please enter your comment!
Please enter your name here