






ಬೆಳ್ತಂಗಡಿ : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು-2026 ಕಾರ್ಯಕ್ರಮವು ಅ.8 ರಂದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರಗಿತು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.ಯುವ ಸಮುದಾಯಕ್ಕೆ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಪರಿಚಯ ಮಾಡಿಕೊಡುವ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ತಾಲೂಕು ಮಟ್ಟದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಪ್ರೌಢ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಅಣುಕು ಸಂಸತ್ (Mock Parliament) ಕಲಾಪ ನಡೆಸಿ, ಸ್ಥಳೀಯ ಹಾಗೂ ಪ್ರಚಲಿತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು.


ತೀರ್ಪುಗಾರರಾಗಿ ರಮೇಶ್, ಚೇತನಾಕ್ಷಿ ಹಾಗೂ ಮುರಳೀಧರ್ ಅವರು ಸಹಕರಿಸಿದರು.ಉದ್ಘಾಟನಾ ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಬಿ., ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್.ಲೋಬೊ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್, ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ, ಉಪನ್ಯಾಸಕರಾದ ನಟರಾಜ್, ಕೀರ್ತಿರಾಜ್, ಸಂತೋಷ್, ಶಿಕ್ಷಕರಾದ ಕಿರಣ್, ಇಸಾಕ್, ಶೈಲೇಶ್, ಜಯರಾಮ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.









