ನಾವೂರು ಆರೋಗ್ಯ ಕ್ಲಿನಿಕ್‌ಗೆ ದುಷ್ಕರ್ಮಿಗಳಿಂದ ಬೆಂಕಿ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಖಂಡನೆ

0

ಉಜಿರೆ : ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಅವರಿಗೆ ಸೇರಿದ ಆರೋಗ್ಯ ಕ್ಲಿನಿಕ್‌ಗೆ ಅ. 6 ರಂದು ತಡರಾತ್ರಿ ದುಷ್ಕರ್ಮಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಕ್ಲಿನಿಕ್‌ನ ಮೂರು ಕೊಠಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

ದುಷ್ಕೃತ್ಯಕ್ಕೆ ಖಂಡನೆ:ಈ ಅಮಾನವೀಯ ಮತ್ತು ಹೇಯ ಕೃತ್ಯವನ್ನು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ತೀವ್ರವಾಗಿ ಖಂಡಿಸಲಾಗಿದೆ. ಆರೋಗ್ಯ ಸೇವೆ ನೀಡುತ್ತಿರುವ ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚುವುದು ಸಮಾಜಘಾತುಕ ಕೃತ್ಯವಾಗಿದ್ದು, ಇದು ವ್ಯಾಪಾರಸ್ಥರಲ್ಲೂ ಆತಂಕ ಮೂಡಿಸಿದೆ. ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here