ಬೆಳೆವಿಮೆ ಅನ್ಯಾಯ ಖಂಡಿಸಿ ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರೈತರ ಬೃಹತ್ ಪ್ರತಿಭಟನೆ​

0

ಪದ್ಮುಂಜ (ಅಕ್ಟೋಬರ್ 09): ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ಕೃಷಿಕರಿಗೆ ಬೆಳೆವಿಮೆ ವಿತರಣೆಯಲ್ಲಿ ಎದುರಾಗಿರುವ ಗಂಭೀರ ಅನ್ಯಾಯವನ್ನು ಖಂಡಿಸಿ ಹಾಗೂ ರೈತರ ಹಕ್ಕುಗಳನ್ನು ಒದಗಿಸುವಂತೆ ಒತ್ತಾಯಿಸಿ, ಇಂದು (ಅ.09) ಮಂಗಳೂರಿನ ಟೌನ್ ಹಾಲ್‌ನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ಅತ್ಯಂತ ಯಶಸ್ವಿಯಾಗಿ ಜರುಗಿತು.​

ಬೆಳೆವಿಮೆ ಪರಿಹಾರ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಕೃಷಿಕರ ಧ್ವನಿಯನ್ನು ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ನಿಟ್ಟಿನಲ್ಲಿ ನಡೆದ ಈ ಸಭೆಯಲ್ಲಿ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ, ಬಂದಾರು, ಮೊಗ್ರು ಹಾಗೂ ಕಣಿಯೂರು ಗ್ರಾಮಗಳ ಜನಪ್ರತಿನಿಧಿಗಳು, ಪ್ರಮುಖರು ಮತ್ತು ನೂರಾರು ಸಂಖ್ಯೆಯಲ್ಲಿ ರೈತರು ಉತ್ಸಾಹದಿಂದ ಭಾಗವಹಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.​

ರೈತರಿಗೆ ಆಗಿರುವ ಅನ್ಯಾಯ ಸರಿಹೋಗುವವರೆಗೆ ಮತ್ತು ನ್ಯಾಯಯುತವಾದ ಬೆಳೆವಿಮೆ ಪರಿಹಾರ ದೊರೆಯುವವರೆಗೆ ಹೋರಾಟವನ್ನು ಮುಂದುವರಿಸಲು ಈ ಸಭೆಯಲ್ಲಿ ನಿರ್ಧರಿಸಲಾಯಿತು.

LEAVE A REPLY

Please enter your comment!
Please enter your name here