






ಬೆಳ್ತಂಗಡಿ: ನಾವೂರಿನ ಡಾ. ಪ್ರದೀಪ್ ಅವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳ ಕೃತ್ಯವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ತೀವ್ರವಾಗಿ ಖಂಡಿಸಿದೆ.


ಆರೋಗ್ಯ ಸೇವೆ, ಸಮಾಜಸೇವೆ ಹಾಗೂ ಸಂಸ್ಕಾರದ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಸಮಾಜದ ಸರ್ವಧರ್ಮೀಯರನ್ನು ಸಮಾನವಾಗಿ ಕಾಣುವ ಧೀಮಂತ ವೈದ್ಯರಾದ ಡಾ. ಪ್ರದೀಪ್ ಅವರ ಸೇವೆ ಅಮೋಘವಾದದ್ದು ಎಂದು ಸಂಘಟನೆ ತಿಳಿಸಿದೆ.
ಅವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಕೃತ್ಯದ ಕುರಿತು ಸಂಬಂಧಪಟ್ಟ ಇಲಾಖೆಯು ಪಾರದರ್ಶಕ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿ, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಸರ್ವ ಸದಸ್ಯರು ಒತ್ತಾಯಿಸಿದ್ದಾರೆ.









