






ಲಾಯಿಲ: ಓಡದಕರಿಯ ಶ್ರಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.11 ರಿಂದ 21ವರೆಗೆ ನಡೆಯಲಿದೆ.ಅ.1 ರಂದು ಬೆಳಿಗ್ಗೆ 9-00 ರಿಂದ ತೋರಣ ಮುಹೂರ್ತ, ಪುಣ್ಯಾಹ, ಗಣಹೋಮ,ಪಂಚಾಮೃತ ಅಭಿಷೇಕ, ತೆನೆ ಮುಹೂರ್ತ, ಭಜನಾ ಕಾರ್ಯಕ್ರಮ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ ಹಾಗೂ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.


ಅ.12ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ. ಅ.13 ರಂದು ರಾತ್ರಿ 7 ರಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ. ಅ.14ರಂದು ರಾತ್ರಿ 7ರಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಅ.15 ರಂದು ಬೆಳಿಗ್ಗೆ 8-30ರಿಂದ ನವಕ ಪ್ರಧಾನ ಹೋಮ, ಕಲಾಶಾಭಿಷೇಕ, ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಮಧ್ಯಾಹ್ನ 12ಕ್ಕೆ ಅಮ್ಮನವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 7ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8-30ರಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಅ.16ರಂದು ಸಂಜೆ 7ರಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಅ.17, 18, 19 20 ರಾತ್ರಿ 7ರಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಅ.21ರಂದು ಬೆಳಿಗ್ಗೆ 8ರಿಂದ ಪಂಚಾಮೃತ ಅಭಿಷೇಕ, ನಾಗ-ನಾಗಬ್ರಹ್ಮ ಸಾನಿಧ್ಯದಲ್ಲಿ ನಾಗತಂಬಿಲ, ಅಶ್ವತ್ಥನಾರಾಯಣ ಪೂಜೆ ಹಾಗೂ ಪರಿವಾರ ದೈವಗಳಿಗೆ ಪರ್ವ, ಬೆಳಿಗ್ಗೆ 11ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12-30ರಿಂದ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8 ರಿಂದ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.









