ವೆಟರನ್ಸ್ ನ್ಯಾಷನಲ್ ಚಾಂಪಿಯನ್ಶಿಪ್ ನಲ್ಲಿ ಮಿತ್ತಬಾಗಿಲಿನ ಶಿಕ್ಷಕಿ ಸೌಮ್ಯ ಕೆ ಅವರಿಗೆ 3 ಚಿನ್ನ, 3 ಬೆಳ್ಳಿ ಹಾಗೂ 1 ಕಂಚಿನ ಪದಕ

0

ಬೆಳ್ತಂಗಡಿ : ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಅ.9ರಿಂದ 11ರವರೆಗೆ ನಡೆದ 5ನೇ ವೆಟೆರನ್ಸ್ ಸ್ಪೋರ್ಟ್ಸ್ ಅಂಡ್ ಗೇಮ್ಸ್ ನ್ಯಾಷನಲ್ ಚಾಂಪಿಯನ್ಶಿಪ್ ನಲ್ಲಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿಯಾಗಿರುವ ಸೌಮ್ಯ ಕೆ. ಅವರು 3 ಚಿನ್ನ, 3 ಬೆಳ್ಳಿ ಹಾಗೂ 1 ಕಂಚಿನ ಪದಕ ಪಡೆದು ಶ್ರೇಷ್ಠ ಸಾಧನೆ ಮಾಡಿದ್ದಾರೆ.

40ರಿಂದ 45 ವರ್ಷ ವಿಭಾಗದಲ್ಲಿ ಭಾಗವಹಿಸಿ ವಿಜೇತರಾಗಿರುವ ಇವರು ಬಂಗಾಡಿ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ ಅವರ ಪುತ್ರಿ.

LEAVE A REPLY

Please enter your comment!
Please enter your name here