ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಖ್ಯಾತ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

0

ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳಲ್ಲಿ ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯೂಟ್ಯೂಬರ್ ಶಿಲ್ಪ ಶೆಟ್ಟಿ ಮಂಗಳೂರು ಎಂಬವರ ವಿರುದ್ಧ ಕೇಸು ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಉಪ ನಿರೀಕ್ಷಕರಿಗೆ ಬೆಳ್ತಂಗಡಿ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಅ. 13 ರಂದು ಮನವಿಯನ್ನು ನೀಡಲಾಯಿತು.

ಛಾಯಾಗ್ರಾಣವು ಕೌಶಲ್ಯ ಪರಿಶ್ರಮ ತಾಂತ್ರಿಕ ಜ್ಞಾನ ಮತ್ತು ವೃತ್ತಿಪರ ಬದ್ಧತೆಯನ್ನು ಒಳಗೊಂಡ ವೃತ್ತಿಯಾಗಿರುತ್ತದೆ ಜಾಲತಾಣಗಳಲ್ಲಿ ಇಂತಹ ಹೇಳಿಕೆಗಳು ವ್ಯಾಪಕವಾಗಿ ಸಾಧ್ಯತೆ ಇರುವುದರಿಂದ ಛಾಯಾಗ್ರಾಹಕರಲ್ಲಿ ನೋವನ್ನು ಉಂಟು ಮಾಡಿದೆ ಸಂಬಂಧ ಪಟ್ಟ ಇಲಾಖೆ ಇಂತಹ ಹೇಳಿಕೆಗಳನ್ನು ನೀಡುವವರನ್ನು ತಕ್ಷಣ ವಿಚಾರಿಸಿ ತಮಗೆ ನ್ಯಾಯವನ್ನು ಒದಗಿಸಿ ಕೊಡಬೇಕಾಗಿ ಬೆಳ್ತಂಗಡಿ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here