ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ : ‘ಪ್ರೇರಣಾ -2026’ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿ

0

ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ ತಾಲೂಕು ಇದರ ಮಹಿಳಾ ಬಂಟರ ವಿಭಾಗ ಹಾಗೂ ಯುವ ಬಂಟರ ವಿಭಾಗದ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11, 2026ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ‘ಪ್ರೇರಣಾ -2026’ ವೃತ್ತಿ ಮಾರ್ಗದರ್ಶನ ಮತ್ತು ಪರಿಚಯಾತ್ಮಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

9ನೇ ತರಗತಿಯಿಂದ ಪದವಿ ಹಂತದವರೆಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 200 ಬಂಟ ಸಮುದಾಯದ ವಿದ್ಯಾರ್ಥಿಗಳು ಭಾಗವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ದಿಶಾ ಕೌನ್ಸೆಲಿಂಗ್ ಮತ್ತು ತರಬೇತಿ ಕೇಂದ್ರದ ಮುಖ್ಯಸ್ಥೆ, ವೃತ್ತಿ ಮಾರ್ಗದರ್ಶಕಿ ಶ್ರೀಮತಿ ರಾಜೇಶ್ವರಿ ಡಿ. ಶೆಟ್ಟಿ ಹಾಗೂ ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ವೃತ್ತಿ ಆಯ್ಕೆ ಹಾಗೂ ಭವಿಷ್ಯದ ಅವಕಾಶಗಳ ಕುರಿತು ಉಪಯುಕ್ತ ಮಾರ್ಗದರ್ಶನ ನೀಡಿದರು.

ಮುಖ್ಯ ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಹಿಳಾ ಬಂಟರ ವಿಭಾಗದ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಬೆಳ್ತಂಗಡಿ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ನೊಚ್ಚ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತವಚನ ನೀಡಿದರು. ಸಭೆಯಲ್ಲಿ ಯುವ ಬಂಟರ ವಿಭಾಗದ ಅಧ್ಯಕ್ಷರಾದ ಅಜಯ್ ಶೆಟ್ಟಿ ತಾಲೂಕು ಬಂಟರ ಸಂಘದ ಉಪಾಧ್ಯಕ್ಷರಾದ ರಾಜು ಶೆಟ್ಟಿ, ಬೆಂಗ್ಯಾತರು, ಮಾತೃ ಸಂಘದ ಸಂಚಾಲಕರಾದ ಜಯರಾಮ್ ಭಂಡಾರಿ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಶ್ರೀಮತಿ ವಸುಧಾ ಪ್ರಶಾಂತ್ ಶೆಟ್ಟಿ, ಮಹಿಳಾ ಬಂಟರ ವಿಭಾಗದ ಕಾರ್ಯದರ್ಶಿ ಸಂಸ್ಕೃತಿ ರೈ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಯುವ ಬಂಟರ ವಿಭಾಗದ ಕಾರ್ಯದರ್ಶಿ ನಿಧೀಶ್ ಶೆಟ್ಟಿ ಬಂಟರ ವಿಭಾಗದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here