






ಮುಂಡಾಜೆ : ಉಡುಪಿ ಜಿಲ್ಲೆಯ ಕುಂದಾಪುರ ವಲಯದ ಬೆಳ್ವೆ ಕ್ರೀಡಾಂಗಣದಲ್ಲಿ ಜರಗಿದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯ ಬಾಲಕಿಯರನ್ನು ಒಳಗೊಂಡ ತಂಡ ಚಾಂಪಿಯನ್ ಆಗಿ ಅ. 17ಮತ್ತು 18 ರಂದು ಉತ್ತರ ಕನ್ನಡ ಜಿಲ್ಲೆಯ ಕುಮುಟಾದಲ್ಲಿ ನಡೆಯುವ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.


ತಂಡದ ತರಬೇತುದಾರರಾದ ಗುಣಪಾಲ್ ಎಂ. ಎಸ್, ಸಂದೀಪ್ ಶೆಟ್ಟಿ ಹಾಗೂ ಬಾಲಕೃಷ್ಣ ಸಹಕರಿಸಿದರು.









