ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸಮರ್ಥ್ ಭಟ್‌ಗೆ ಪ್ರಥಮ ಸ್ಥಾನ## ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸಮರ್ಥ್ ಭಟ್‌ಗೆ ಪ್ರಥಮ ಸ್ಥಾನ

0

ಧರ್ಮಸ್ಥಳ:ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಮರ್ಥ್ ಭಟ್ ಅವರು ಗಂಗಾವತಿಯಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಅರ್ಹತೆ ಗಳಿಸಿದ್ದಾರೆ.

ಚೆಸ್ ಕ್ರೀಡೆಯಲ್ಲಿ ತಮ್ಮ ಪ್ರತಿಭೆ ಹಾಗೂ ಬುದ್ಧಿವಂತಿಕೆಯನ್ನು ಮೆರೆದ ಸಮರ್ಥ್ ಭಟ್ ಅವರ ಈ ಸಾಧನೆ ಶಾಲೆಗೆ ಹೆಮ್ಮೆ ತಂದಿದೆ. ಅವರ ಈ ಯಶಸ್ಸಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

ಸಮರ್ಥ್ ಭಟ್ ಅವರು ಡಾ ಗಣೇಶ್ ಪ್ರಸಾದ್ ಮತ್ತು ಜ್ಯೋತಿ ಅವರ ಪುತ್ರರಾಗಿರುತ್ತಾರೆ.

LEAVE A REPLY

Please enter your comment!
Please enter your name here