






ಬೆಳ್ತಂಗಡಿ: ತಾಲೂಕಿನ ಮುಖ್ಯ ರಸ್ತೆಯ ಜೈನಪೇಟೆ ಬಳಿ ರಿಕ್ಷಾ ಮತ್ತು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಬೈಕ್ ಸವಾರ ಗಂಭೀರ ಅಪಾಯದಿಂದ ಪಾರಾಗಿದ್ದಾರೆ.


ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನನ್ನು ಸುಶ್ಮಿತ್ (21) ಎಂದು ಗುರುತಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಪೆಟ್ಟಾಗಿದ್ದು, ಕೂಡಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.









